ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಶನಿವಾರ ಜರುಗಿದ “ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ” ಕಾರ್ಯಕ್ರಮವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಕ್ಷತಾ ಬಿರಾದಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಶಾರದಾ ಆಲಗೂರ್, ಎಚ್.ಬಿ ಪಾಟೀಲ್, ರಾಜಶೇಖರ ಹಿರೇಗೌಡ ಮತ್ತು ಶಿವರುದ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಒಂದೆ ದಿನಕ್ಕೆ 1 ಕೋಟಿ ಆದಾಯ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ 2ನೇ ದಿನವಾದ ಇಂದು ಸಾವಿರಾರು ಭಕ್ತರು ಮುಂಜಾನೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪಾವನರಾದರು. ಕೆಲವರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾದು ನಿಂತಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಸಹಜವಾಗಿಯೇ ಹೆಚ್ಚುಗಿತ್ತು. 1 ಸಾವಿರ ಟಿಕಟ್‌ನ ಸಾಲು ಖಾಲಿ ಇದ್ದರೆ, 300 ರೂ. ವಿಶೇಷ ದರ್ಶನದ ಸರತಿ ಸಾಲು ಸಂಪೂರ್ಣ ಭರ್ತಿಯಾಗಿದ್ದವು. ಸಚಿವ ಶಿವರಾಜ್ ತಂಗಡಗಿ, ಶಾಸಕ […]

Continue Reading

ವಾಡಿ ಪಟ್ಟಣದಲ್ಲಿ ಒಂದು ವಾರದಿಂದ ನೀರು ಸರಬರಾಜು ಮಾಡದ ಪುರಸಭೆ: ನೀರಿಗಾಗಿ ನಿವಾಸಿಗರ ಪರದಾಟ

ವಾಡಿ: ಪಟ್ಟಣದ ಕೆಲವು ವಾರ್ಡಗಳಲ್ಲಿ ಕಳೆದ ಒಂದು ವಾರದಿಂದ ಪುರಸಭೆ ನೀರು ಸರಬರಾಜು ಮಾಡದಿರುವುದರಿಂದ ವಾರ್ಡ್ ನಿವಾಸಿಗರು ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಕರೆ ಮಾಡಿದರೆ ಮೊಬೈಲ್ ಸ್ವಿಚ್ ಆಫ್, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಮೋಟಾರ್ ಸಮಸ್ಯೆ ಎನ್ನುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ ಪೈಪ್ ಲೈನಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ 50 […]

Continue Reading

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಂಜಾರ ಸಮಾಜ ಮತ್ತು ನವರಾತ್ರಿ ಉತ್ಸವ ಸಮಿತಿಯಿಂದ ಗೌರವ ಸನ್ಮಾನ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಂಜಾರ ಸಮಾಜ ಮತ್ತು ನವರಾತ್ರಿ ಉತ್ಸವ ಸಮಿತಿಯ ಮುಖಂಡರಿಂದ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನ ಸರ್ಕಾರಿ ವಸತಿ ಗೃಹದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶನಿವಾರ ಭೇಟಿ ಮಾಡಿ ಚಿತ್ತಾಪುರ ಸ್ಟೇಷನ್ ತಾಂಡಾದ 25ನೇ ವರ್ಷದ ನವರಾತ್ರಿ ಉತ್ಸವದ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಸಚಿವರು ಮಾತನಾಡಿ, ಕೆಲಸದ […]

Continue Reading

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಲಕ್ಷ್ಮಿಗಂಜ ಬಡಾವಣೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯ ಸಭಾಗೃಹದಲ್ಲಿ ನಡೆದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ತುಂಬಾ ಉಪಯೋಗಿಯಾಗಿದ್ದು, ಎಲ್ಲರು ಉತ್ತಮ ರೀತಿಯಲ್ಲಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬೆಳೆಯಬೇಕು ಎಂದರು. ಧರ್ಮಸ್ಥಳ ಜನಜಾಗೃತಿ ವೇದಿಕೆಯ ಸದಸ್ಯ ವಾಸುದೇವ ಚವ್ಹಾಣ್ ಮಾತನಾಡಿ, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ […]

Continue Reading

ಕನ್ನಡಕ್ಕೆ ಕಾರಂತರ ಕೊಡುಗೆ ಅಪಾರ: ಎಚ್.ಬಿ ಪಾಟೀಲ      

ಕಲಬುರಗಿ: ಕನ್ನಡದ “ಕಡಲತೀರದ ಭಾರ್ಗವ” ಎಂದೆ ಪ್ರಸಿದ್ಧರಾದ ಡಾ.ಕೆ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ ಮತ್ತು ವೈಜ್ಞಾನಿಕ ಬರಹಗಾರ. ಕನ್ನಡಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿನ ನರೇಂದ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಕೆ.ಶಿವರಾಮ ಕಾರಂತರ 123ನೇ  ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾರಂತರು 200ಕ್ಕೂ ಹೆಚ್ಚು ಕೃತಿಗಳನ್ನು […]

Continue Reading

ʻನೊಬೆಲ್‌ ಶಾಂತಿ ಪ್ರಶಸ್ತಿʼಯನ್ನು ಟ್ರಂಪ್‌ಗೆ ಅರ್ಪಿಸಿದ ಕೊರಿನಾ ಮಚಾದೋ

ನವದೆಹಲಿ: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಮಾರಿಯಾ ಕೊರಿನಾ ಮಚಾದೋ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೆನೆಜುವೆಲಾದ ಜನರ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ಮತ್ತು ಶಾಂತಿಗಾಗಿ ನಡೆಸಿದ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಹರ್ಷ ವ್ಯಕ್ತಪಡಿಸಿರುವ ಮಚಾದೋ, ನೊಬೆಲ್‌ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುರಸ್ಕಾರವನ್ನು ವೆನೆಜುವೆಲಾದ […]

Continue Reading

ಅಂಬಿಗರ ಚೌಡಯ್ಯ ಮೂರ್ತಿ ಭಗ್ನ: ಕೋಲಿ ಸಮಾಜದಿಂದ ಬೃಹತ್ ಪ್ರತಿಭಟನೆ‌

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ, ಕೋಲಿ ಸಮಾಜದ ಸ್ವಾಭಿಮಾನ ಕೆರಳಿಸಿದಂತಾಗಿದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ನಿಂಗಪ್ಪ ಹುಳಗೋಳಕರ ಉಗ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಮುತ್ತಗಾ ಗ್ರಾಮದ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಘಟನೆ ವಿರೋಧಿಸಿ ಕೋಲಿ ಸಮಾಜದ ವತಿಯಿಂದ ಶುಕ್ರವಾರ ಭಂಕೂರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಂಬಿಗರ ಚೌಡಯ್ಯನವರು ಸಾಮಾಜಿಕ ಹರಿಕಾರರು, ಅವರು […]

Continue Reading

ಚಿತ್ತಾಪುರ: ರವಿ ಸಿಮೆಂಟ್ ಏಜೆನ್ಸಿಯ 30ನೇ ವಾರ್ಷಿಕೋತ್ಸವ ಚಿತ್ತಾಪುರ: ಗ್ರಾಹಕರ ಸಹಕಾರ ಮತ್ತು ಕಟ್ಟಡ ಕಾರ್ಮಿಕರದಿಂದ ಕಳೆದ 30 ವರ್ಷಗಳಿಂದ ಎಸಿಸಿಸಿಮೆಂಟ್ ಏಜೆನ್ಸಿಯನ್ನು ಮುನ್ನಡೆಸುವ ಮೂಲಕರವಿ ಪಾಟೀಲ ಇತಿಹಾಸ ನಿರ್ಮಿಸಿದ್ದಾರೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ಉಡುಪಿ ಹೋಟೆಲ್​ನಲ್ಲಿ ನಡೆದ ರವಿಸಿಮೆಂಟ್ ಏಜೆನ್ಸಿಯ 30 ನೇ ವಾರ್ಷಿಕೋತ್ಸವಸಮಾರಂಭ, ಗ್ರಾಹಕರ ಸಮಾವೇಶ ಹಾಗೂ ಸನ್ಮಾನಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದಅವರು, ಎಸಿಸಿ ಸಿಮೆಂಟ್ ರಾಷ್ಟ್ರ ಮತ್ತುಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದಸಿಮೆಂಟ್ ಆಗಿದೆ ಎಂದು ಹೇಳಿದರು. ಉದ್ಘಾಟನೆ […]

Continue Reading

ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ: ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಪರಿಣಾಮ ತಾಲೂಕಿನಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ. ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪಾ ಪಾಳಾ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶ್ವಾನದಳ ಅಧಿಕಾರಿಗಳು ಮತ್ತು ಗ್ರಾಮ ಲೇಖಾಧಿಕಾರಿ ರೇವಣಸಿದ್ದಪ್ಪ ಪಾಟಿಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ […]

Continue Reading