ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸತ್ಕರಿಸಿದ ಟಿಎಪಿಸಿಎಂಎಸ್ ಅಧ್ಯಕ್ಷ ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರ
ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS)ಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ದೇವಿಂದ್ರ ಅರಣಕಲ್ ಅವರು ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಿಗೆ ಬುದ್ಧನ ಪ್ರತಿಮೆ ನೀಡಿ ಗೌರವಿಸಿದ ದೇವಿಂದ್ರ ಅರುಣಕಲ್ ಅವರು, ಸಹಕಾರ ಸಂಘದ ಮುಂದಿನ ಕಾರ್ಯವೈಖರಿ ಹಾಗೂ ರೈತರ ಹಿತರಕ್ಷಣೆ ಕುರಿತು ಸಚಿವರೊಂದಿಗೆ ಚರ್ಚಿಸಿದರು.

ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದ ಸಚಿವರು ಸಹಕಾರಿ ಸಂಘವನ್ನು ಮಾದರಿಯಾಗಿ ಮುನ್ನಡೆಸುವಂತೆ ತಿಳಿಸಿದರು.

ಕೋಲಿ ಕಬ್ಬಲಿಗ ಎಸ್ಪಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ್, ಪಿಎಲ್ಡಿ ಬ್ಯಾಂಕ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನ‌ರ್, ತಾ.ಪಂ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಭಾಗೋಡಿ, ಎಪಿಎಂಸಿ ಮಾಜಿ ಸದಸ್ಯ ಹಣಮಂತ ಸಂಕನೂರ, ಮುಖಂಡರಾದ ಇಂದುಶೇಖರ್ ಬೆಂಕಿ, ಪ್ರಭು ಹಲಕರ್ಟಿ, ಬಸವರಾಜ ಚಿನ್ನಮಳ್ಳಿ, ನಾಗೇಂದ್ರ ಜೈಗಂಗಾ, ಬಸವರಾಜ ಪಾಟೀಲ ದಳಪತಿ, ಮಲ್ಲಪ್ಪ ಮಳಖೇಡ ಮತ್ತು ಪಾಶಾ ಶಿರೂರು ಸೇರಿದಂತೆ ಅನೇಕರು ಇದ್ದರು

Leave a Reply

Your email address will not be published. Required fields are marked *