ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

ಜಿಲ್ಲೆ

ಸುದ್ದಿ ಸಂಗ್ರಹ ಹಾವೇರಿ
ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿ ಹೊತ್ತಿ ಉರಿದಿದೆ. ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ ಔಷಧಿ, 50 ಲಕ್ಷ ರೂ. ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಯಾವುದೆ ರೋಗಿಗಳಿಗೂ ತೊಂದರೆ ಆಗಿಲ್ಲ. ಸ್ಥಳಕ್ಕೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.

Leave a Reply

Your email address will not be published. Required fields are marked *