ಚಿತ್ತಾಪುರ: ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಶಿಕ್ಷಣರತ್ನ ಪ್ರಶಸ್ತಿ’ಗೆ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿರುವ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನಾಳೆ ಸಂಜೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಿಕ್ಷಣರತ್ನ ಪ್ರಶಸ್ತಿ, ನಿವೃತ್ತ ನ್ಯಾಯಮೂರ್ತಿ ಡಾ. ಸಂತೋಷ ಹೆಗಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ನಿರ್ದೇಶಕ ಸುನೀಲಕುಮಾರ ದೇಸಾಯಿ ಸೇರಿದಂತೆ ನಾಡಿನ ಹೆಸರಾಂತ ಚಿತ್ರ ಕಲಾವಿದರು, ಪೂಜ್ಯರು ಉಪಸ್ಥಿತರಿರುವರು ಎಂದು ಸಂಸ್ಥೆಯ ಅಧ್ಯಕ್ಷ ಝಾಕೀರ್ ಹುಸೇನ್ ತಿಳಿಸಿದ್ದಾರೆ.