ಚಿತ್ತಾಪುರ: ಸಚ್ಚಿದಾನಂದ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಸಚ್ಚಿದಾನಂದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಶರಣು ತಂದೆ ಮಹಿಂದ್ರಾ (10ನೇ) ಮತ್ತು ಉಲ್ಲಾಸ್ ತಂದೆ ಸುನೀಲ (9ನೇ) ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಕಲಬುರಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಗಳಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ, ಮುಖ್ಯಗುರು ವಿದ್ಯಾಧರ ಖಂಡಾಳ ಸೇರಿದಂತೆ ಸಂಸ್ಥೆಯ ಸದಸ್ಯರು ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಕ ಸಿದ್ದಲಿಂಗ ಬಾಳಿ ಮಾತನಾಡಿ, ಸತತ ಎರಡನೇ ಬಾರಿಗೆ ನಮ್ಮ ಶಾಲೆಯ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವದು ಹೆಮ್ಮೆಯ ವಿಷಯ. ಈ ಬಾರಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗೆಲ್ಲುವ ಗುರಿ ಹೊಂದಿದ್ದೆವೆ ಎಂದರು.