ಕಲಬುರಗಿ: ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ್ ಇಲಾಖೆ ವತಿಯಿಂದ ಕೊಡಮಾಡಿದ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಭುವನೇಶ್ವರಿ ಭಾವಚಿತ್ರ ನೀಡಿ, ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.