ಚಿತ್ತಾಪುರ: ತಾಲೂಕು ಕೋಲಿ ಸಮಾಜದಿಂದ ಜ.28 ರಂದು ಹಮ್ಮಿಕೊಂಡಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯ ಶೋಭಾಯಾತ್ರೆಗೆ ಚಾಲನೆ ನೀಡಲು ಕರ್ನಾಟಕ ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರಿಗೆ ರವಿವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು.
ಕೋಲಿ ಸಮಾಜದ ಹಿರಿಯ ಮುಖಂಡ, ಎನ್ಇಕೆಆರ್ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣಾ ಸಾಲಿ ಅವರ ನೇತೃತ್ವದಲ್ಲಿ ಕೋಲಿ ಸಮಾಜದ ನಿಯೋಗವು ಬಾಬುರಾವ್ ಚಿಂಚನಸೂರು ಅವರನ್ನು ಕಲಬುರಗಿಯ ಅವರ ನಿವಾಸದಲ್ಲಿ ಭೇಟಿ ಮಾಡಿ, ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಾಜದಿಂದ ಹಮ್ಮಿಕೊಂಡಿರುವ ಶೋಭಾಯಾತ್ರೆಗೆ ಚಾಲನೆ ನೀಡಲು ಖಂಡಿತಾ ಬರುವೆ. ಯಾವುದೆ ಕಾರ್ಯಕ್ರಮವಿದ್ದರು ಎಲ್ಲವು ರದ್ದುಪಡಿಸಿ ಚಿತ್ತಾಪುರಕ್ಕೆ ಬರುತ್ತೆನೆ ಎಂದು ಚಿಂಚನಸೂರು ಅವರು ನಿಯೋಗಕ್ಕೆ ಹೇಳಿದರು.
ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ, ಹಿರಿಯ ಮುಖಂಡರಾದ ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ದೇವಿಂದ್ರ ಅರಣಕಲ್, ಮುನಿಯಪ್ಪಾ ಕೊಳ್ಳಿ, ಮಲ್ಲಿಕಾರ್ಜುನ ಸಂಗಾವಿ, ಪ್ರಧಾನ ಕಾರ್ಯದರ್ಶಿ ಕರಣಕುಮಾರ ಅಲ್ಲೂರ್, ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಇದ್ದರು.