ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ.
ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲಾಗುವುದು. ಹೆಸರು ನೋಂದಾಯಿಸಲು ಹಾಗೂ
ಮಾಹಿತಿಗಾಗಿ 7349109508, 9902185564 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.