5-6 ತಿಂಗಳಲ್ಲಿ ಮಹಿಳೆರಿಗೆ ಕ್ಯಾನ್ಸರ್‌ ಲಸಿಕೆ ಲಭ್ಯ: ಕೇಂದ್ರ ಸಚಿವ ಜಾಧವ್‌

ರಾಷ್ಟೀಯ

ನವದೆಹಲಿ: ಮಹಿಳೆಯರ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿರುವ ಲಸಿಕೆ ಮುಂದಿನ 5-6 ತಿಂಗಳೊಳಗೆ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪರಾವ ಜಾಧವ್‌ ತಿಳಿಸಿದ್ದಾರೆ.

ಲಸಿಕೆಯ ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ, ಪ್ರಯೋಗಗಳು ನಡೆಯುತ್ತಿವೆ. ಇದು ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ. ಒಂಬತ್ತರಿಂದ 16 ವರ್ಷ ವಯಸ್ಸಿನ ಹುಡುಗಿಯರು ಲಸಿಕೆಗೆ ಅರ್ಹರಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದೆ. 30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗುತ್ತಾರೆ. ರೋಗವನ್ನು ಮೊದಲೇ ಪತ್ತೆಹಚ್ಚಲು ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಜಾಧವ್ ಹೇಳಿದ್ದಾರೆ.

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *