ಪತ್ರಿಕಾ ದಿನಾಚರಣೆ ನಿಮಿತ್ಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಸುದ್ದಿ ಸಂಗ್ರಹ

ಚಿತ್ತಾಪುರ: ಪಟ್ಟಣದ ಬಾಲಕರ ಪ್ರೌಢ ಶಾಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಯಿತು.

ರೇವಣಸಿದ್ಧಪ್ಪ ಕಾಂತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವಶರಣಪ್ಪ ಬಿರಾದಾರ ಅವರು ಸಿಸಿಗೆ ನೀರುಣಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಾಶಿರಾಯ ಕಲಾಲ್ ಮತ್ತು ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಮಾತನಾಡಿದರು.

ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಡಿ ಮಶಾಖ, ಪತ್ರಕರ್ತರಾದ ಕಾಶಿನಾಥ ಗುತ್ತೇದಾರ, ಮಲ್ಲಿಕಾರ್ಜುನ ಮುಡಬೂಳಕರ್, ಡಾ. ಸಾಬಣ್ಣ ಗುಡುಬಾ, ವಿಕ್ರಂ, ಅಣ್ಣಾರಾಯ, ಜಗದೇವ ಕುಂಬಾರ, ಸಂತೋಷ ಕಟ್ಟಿಮನಿ, ಪೃಥ್ವಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.

ಕಾರ್ಯಕ್ರಮವನ್ನು ಪತ್ರಕರ್ತರಾದ ನಾಗಯ್ಯ ಸ್ವಾಮಿ ಅಲ್ಲೂರ್ ಅವರು ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಸಂಘದ ಖಜಾಂಚಿ ಜಗದೇವ ದಿಗ್ಗಾಂವಕರ್ ಸ್ವಾಗತಿಸಿದರು. ಪತ್ರಕರ್ತ ಮಡಿವಾಳಪ್ಪ ಹೇರೂರ್ ನಿರೂಪಿಸಿದರು.
ಪತ್ರಕರ್ತ ದಯಾನಂದ ಖಜೂರಿ ವಂದಿಸಿದರು.

Leave a Reply

Your email address will not be published. Required fields are marked *