ಕಲಬುರಗಿ: ದೇಶದ ಪ್ರಥಮ ಸ್ವಾತಂತ್ರ ಹೋರಾಟಗಾರ್ತಿಯಾಗಿ ಬಲಿದಾನವಾದ ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮ ಶೂರ, ತ್ಯಾಗ, ಸ್ವಾಭಿಮಾನ, ದೇಶಪ್ರೇಮ, ಕೊಡುಗೆ ಅವಿಸ್ಮರಣೀಯ ಎಂದು ಶಿಕ್ಷಕಿ ಪೂಜಾ ಜಮಾದಾರ ಹೇಳಿದರು.
ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವೀರಮಾತೆ ಕಿತ್ತೂರ ರಾಣಿ ಚನ್ನಮ್ಮರ 196ನೇ ಪುಣ್ಯಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ ದೊರೆಕಿಸಿಕೊಡುವಲ್ಲಿ, ಸಾಮಾಜಿಕ ನ್ಯಾಯಕ್ಕಾಗಿ, ಮಾನವಿಯ, ನೈತಿಕ ಮೌಲ್ಯಗಳ ಕೊಡುಗೆ ಅವಿಸ್ಮರಣೀಯ ಎಂದರು.
ಉಪನ್ಯಾಸಕ ಎಚ್.ಬಿ.ಳ ಪಾಟೀಲ ಮಾತನಾಡಿ, ಚನ್ನಮ್ಮ ಅವರು ಮಹಿಳೆಯರಿಗೆ ಆದರ್ಶವಾಗಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ಧೀರ ಮಹಿಳೆಯಾಗಿ ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಅಮೂಲ್ಯವಾದ ಕೊಡುಗೆಯ ಮೂಲಕ ಕನ್ನಡಿಗರೆಲ್ಲರು ಹೆಮ್ಮೆಪಡುವಂತಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೃತ್ವಿ ಕೋರವಾರ, ಭಾಗ್ಯಶ್ರೀ ಕಾರಬಾರಿ, ಮುಸ್ಕಾನ್ ಶೇಖ್ ಹಾಗೂ ವಿದ್ಯಾರ್ಥಿಗಳು ಇದ್ದರು