ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದಾಗ ರನೌಟ್ನಿಂದ ಬಚಾವಾಗಲು ಯತ್ನಿಸಿದ ವೇಳೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕುಮಾರ ರೈ ಜಾರಿಬಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕರು ಜಾರಿಬಿದ್ದರು. ಬಂಟರ ಸಂಘದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಶಾಸಕ ಅಶೋಕುಮಾರ ರೈ ಕ್ರಿಕೆಟ್ ಆಡಿದರು. ಬಿದ್ದ ಶಾಸಕರನ್ನು ಸಹ ಆಟಗಾರರು ಎಬ್ಬಿಸಿದರು.