ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ

ಜಿಲ್ಲೆ

ಕಲಬುರಗಿ: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆ ಜ್ವರ ಬರುವುದು, ತೂಕ ಇಳಿಕೆ, ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಇದರ ಬಗ್ಗೆ ನಿರ್ಲಕ್ಷ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು. 2030ಕ್ಕೆ ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು.

ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಸೋಮವಾರ ಜರುಗಿದ ‘ವಿಶ್ವ ಕ್ಷಯರೋಗ ನಿರ್ಮೂಲನಾ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಕ್ಷಯ ಸಂಪೂರ್ಣವಾಗಿ ಗುಣಮುಖವಾಗುವಂತಹ ರೋಗವಾಗಿದೆ. ಇದು ರೋಗಿಯು ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಮುಟ್ಟುವುದರಿಂದ, ಕೈ ಕುಲುಕುವುದರಿಂದ ಬರುವುದಿಲ್ಲ. ಕ್ಷಯ ರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿದೆ. ಇದರ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ಹಸಿರು ತರಕಾರಿ, ಹಾಲು, ಹಣ್ಣು, ಮೊಟ್ಟೆ, ಮೀನು ಸೇವನೆ ಮಾಡಬೇಕು. ಎಣ್ಣೆಯಲ್ಲಿ ಬೇಯಿಸಿದ, ಕರಿದ ಆಹಾರಗಳ ಸೇವನೆ ಬೇಡ ಎಂದು ರೋಗಕ್ಕೆ ಸಂಬAಧಿಸಿದAತೆ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಸಮಾಜ ಸೇವಕ ಎಚ್.ಬಿ ಪಾಟೀಲ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಬಡಾವಣೆಯ ನಾಗರಿಕರಾದ ಶರಣಯ್ಯ ಹಿರೇಮಠ, ಅಭಿಶೇಕ್ ಯಾದಗಿರ್, ಶಿವಕುಮಾರ ಗೊಬ್ಬುರ, ಶಾಂತಯ್ಯ ಸ್ವಾಮಿ, ಶೇಖ್ ಸಲೀಮ್, ರಾಜಕುಮಾರ ಉಜಳಂಬಿ ಸೇವಕ ಸಿದ್ರಾಮ್ ಸೇರಿದಂತೆ ಇನ್ನಿತರರಿದ್ದರು

Leave a Reply

Your email address will not be published. Required fields are marked *