ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ರಾಷ್ಟೀಯ ಸುದ್ದಿ ಸಂಗ್ರಹ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ.

ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು.

ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು.

ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ ಹೇಳುತ್ತೆನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ, ಪತ್ತೆಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದರು.

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ್ದರಿಂದ ಇಡಿ ರಾಷ್ಟ್ರವು ದುಃಖಿತವಾಗಿದೆ. ಈ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲು ಸಾಧ್ಯವಾಗದಷ್ಟು ದೊಡ್ಡ ಶಿಕ್ಷೆ ಸಿಗುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೆನೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಈಗ ಭಯೋತ್ಪಾದನೆಯ ಮಾಸ್ಟರ್‌ಗಳ ಬೆನ್ನು ಮುರಿಯಲಿದೆ ಎಂದು ಗುಡುಗಿದರು.

ಈ ಸಂಕಲ್ಪದಲ್ಲಿ ಇಡಿ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೆನೆ ಎಂದರು.

Leave a Reply

Your email address will not be published. Required fields are marked *