ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒರ್ವ ಬಂಧನ

ಜಿಲ್ಲೆ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ನಡೆದಿದೆ.

ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿ ಬಳಿ ಇದ್ದ ಎರಡು ಮೊಬೈಲ್‌ಗಳು, ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ 32,046 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾರ್ಗದರ್ಶನದಲ್ಲಿ ಸೆನ್ ಠಾಣೆಯ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕೋಲಾರ ಸೆನ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದ್ದಾರೆ.

Leave a Reply

Your email address will not be published. Required fields are marked *