ಚಿತ್ರದುರ್ಗ: ಮದುವೆ ಊಟ ಸೇವಿಸಿದ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೋಮವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ರವಿವಾರ ಮದುವೆ ನಡೆದಿತ್ತು. ಮದುವೆಗೆ ಹಾಜರಾದವರಿಗೆ ರವಿವಾರ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಸೋಮವಾರ ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್ಗಳು ಭರ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.