ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವವನ್ನು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು.
ಗೋಖಲೆಯವರು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.
ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.