ಖಾಸಗಿ ವಾಹನಗಳಿಗೆ 3 ಸಾವಿರ ರೂ. ವಾರ್ಷಿಕ ಟೋಲ್‌ ಪಾಸ್ ಘೋಷಿಸಿದ ನಿತಿನ್ ಗಡ್ಕರಿ

ನವದೆಹಲಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಆಗಸ್ಟ್ 15, 2025 ರಿಂದ 3 ಸಾವಿರ ರೂ. ಬೆಲೆಯ ಹೊಸ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪ್ರಾರಂಭಿಸಲಾಗುವುದಾಗಿ ಘೋಷಣೆ ಹೊರಡಿಸಿದ್ದಾರೆ.

ಇದು ವಾಣಿಜ್ಯೇತರ ವಾಹನಗಳಿಗೆ ದೇಶದ ಹೆದ್ದಾರಿ ಜಾಲದಾದ್ಯಂತ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಉಪಕ್ರಮವನ್ನು ಇಂದು (18) ಘೋಷಿಸಲಾಗಿದೆ.

ತೊಂದರೆ ರಹಿತ ಹೆದ್ದಾರಿ ಪ್ರಯಾಣದತ್ತ ಪರಿವರ್ತಕ ಹೆಜ್ಜೆಯಾಗಿ, 15 ಆಗಸ್ಟ್ 2025 ರಿಂದ ಈ ನಿಯಮ ಜಾರಿಗೆ ಬರುವಂತೆ 3 ಸಾವಿರ ರೂ ಬೆಲೆಯ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪರಿಚಯಿಸುತ್ತಿದ್ದೆವೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ.
ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆಯಾಗಲಿದೆ.ಟೋಲ್ ಪ್ಲಾಜಾಗಳಲ್ಲಿ ವಿವಾದಗಳು ಕಡಿಮೆಯಾಗಲಿದ್ದು ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ಸುಗಮ ಪ್ರಯಾಣದ ಅನುಭವವ ಈ ವಾರ್ಷಿಕ ಪಾಸ್ ನೀಡಲಿದೆ.

ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ. ಇದರ ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.
(ಏಜೆನ್ಸೀಸ್)

Leave a Reply

Your email address will not be published. Required fields are marked *