ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜುಲೈ 20 ರವಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಚೇತನ ಯೂತ್ ಫೌಂಡೇಶನ್ ವತಿಯಿಂದ ನಡೆಯುವ ರಾಷ್ಟ್ರೀಯ ಶಿಕ್ಷಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಬಾಳಿಯವರು ಮಾಡುತ್ತಿರುವ ವಿಭಿನ್ನ ಪ್ರಯೋಗಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.