ರಾವೂರ: ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಒಂದು ತಿಂಗಳ ಪರ್ಯಂತ ಶ್ರಾವಣ ಸತ್ಸಂಗ ಕಾರ್ಯಕ್ರಮ ಸಂಜೆ 7 ರಿಂದ 7.30ರ ವರೆಗೆ ನಡೆಯಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ.
ಜುಲೈ 25 ರಿಂದ ಆಗಸ್ಟ್ 22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಸತ್ಸಂಗಕ್ಕೆ ಬರುವವರು ಬಿಳಿ ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿ ಬರಬೇಕು. ಸತ್ಸಂಗ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಶ್ರೀಮಠದ ವತಿಯಿಂದ ಬಾಳಿಯವರು ವಿನಂತಿಸಿದ್ದಾರೆ.