ರಾಷ್ಟ್ರಕ್ಕೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಕೊಡುಗೆ ಅಪಾರ

ನಗರದ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು.

ನಗರದ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ಡಾ.ಎ.ಪಿ.ಜೆ. ಅಬ್ದುಲ್ ಕಲಾಂರ ಪುಣ್ಯ ಸ್ಮರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿ ದೀಪವಾಗಿದ್ದಾರೆ ಎಂದರು.

ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್ ಮಾತನಾಡಿ, ಕಲಾಂ ಅವರಂತಹ ಮೇರು ವ್ಯಕ್ತಿತ್ವ ಹೊಂದಿದವರು ವಿರಳ. ಅವರಲ್ಲಿರುವ ದೇಶದ ಅಭಿವೃದ್ಧಿಯ ತುಡಿತ ನಮ್ಮೆಲ್ಲರಿಗೆ ಸದಾ ಮಾದರಿಯಾಗಿದೆ. ವಿದ್ಯಾರ್ಥಿಗಳು, ಯುವಕರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ ದೇಗಾಂವ, ಶಿವಯೋಗೆಪ್ಪಾ ಎಸ್.ಬಿರಾದಾರ, ಓಂಕಾರ ವಠಾರ, ಶಿವರಾಜ ಸೇರಿದಂತೆ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *