ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯ ರೈಟರ್ ಪ್ರಶಾಂತ ಎಸ್ ದೇಶೆಟ್ಟಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭನಂದಿಸಲಾಯಿತು.
ನಗರದ ಖಾಸಗಿ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಸೋಮಶೇಖರ ಬಿ ಮುಲಗೆ ಮಾತನಾಡಿ, ದೇಶೆಟ್ಟಿ ಅವರು ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿ ಪದಕ ದೊರೆತಿರುವದು ಸೂಕ್ತವಾಗಿದೆ. ಕಾರ್ಯನಿರ್ವಹಿಸಲು ಪ್ರಶಸ್ತಿ ಮತ್ತಷ್ಟು ಪ್ರೇರಣೆ ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರವಿ ಬಿರಾದಾರ, ಶ್ರೀಶೈಲ ಕುಂಬಾರ, ಮಹಾದೇವಪ್ಪ ಎಚ್.ಬಿರಾದಾರ, ಅಸ್ಲಾಂ ಶೇಖ್, ಸೈಯದ್ ಹಮೀದ್ ಸೇರಿದಂತೆ ಅನೇಕರು ಇದ್ದರು.