ಕಲಬುರಗಿ: ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ದಿ.8ರಂದು ಶುಕ್ರವಾರ ‘ವಿಶ್ವ ಬುಡಕಟ್ಟು ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ ತಿಳಿಸಿದ್ದಾರೆ.
ನಗರದ ಹೊಸ ಜೇವರ್ಗಿ ರಸ್ತೆಯ ಖಮೀತಕರ್ ಕಲ್ಯಾಣ ಮಂಟಪದ ಸಮೀಪವಿರುವ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬೆ.10.30ಕ್ಕೆ ಕಾರ್ಯಕ್ರಮ ಜರುಗಲಿದೆ. ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಉದ್ಘಾಟಿಸಲಿದ್ದಾರೆ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಗುವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ, ಬಸವೇಶ್ವರ ಕಾನ್ವೆಂಟ್ ಶಾಲೆಯ ಕಾರ್ಯದರ್ಶಿ ಸೋಮಶೇಖರ್ ಬಿ.ಮುಲಗೆ, ರಾಜ್ಯ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಮಾರುತಿ ರಾಮತೀರ್ಥ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್. ಬಿರಾದಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಬಿ ನಿಂಗಪ್ಲ ಅಧ್ಯಕ್ಷತೆ, ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಬಿ ಕಂಟೆಗೋಳ, ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ ಭಾಗವಹಿಸಲಿದ್ದಾರೆ.
ಬುಡಕಟ್ಟು ಕಲಾವಿದರಿಗೆ ಸತ್ಕಾರ ಮತ್ತು ಕಲಾ ಪ್ರದರ್ಶನ ಜರುಗಲಿದೆ. ಆಸಕ್ತರು ಭಾಗವಹಿಸಲು ಕೋರಿದ್ದಾರೆ.