ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಬಸವರಾಜ ಅವಂಟಿ

ತಾಲೂಕು

ಚಿತ್ತಾಪುರ: ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ಬಸವರಾಜ ಅವಂಟಿ ಹೇಳಿದರು.

ಪಟ್ಟಣದ ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪರಮೇಶ್ವರ ಪಂಚನಕರ ಮಾತನಾಡಿ, ವಿದ್ಯಾರ್ಥಿಗಳ ಓದಿಗಾಗಿ ಸರ್ಕಾರ ಹಲವಾರು ಮಾರ್ಗೊಪಾಯ ಹಾಕಿಕೊಂಡಿದೆ, ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾಲೇಜಿನ ಉಪ ಪ್ರಾಚಾರ್ಯ ಸಂತೋಷ ಜಮಾದಾರ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೆ ಶಿಕ್ಷಕರ ಮತ್ತು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಸಾಧನೆಯಾಗಿದೆ, ಹೀಗಾಗಿ ವಿದ್ಯಾರ್ಥಿಗಳು ಆಸಕ್ತಿಯಿಂದ ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಫಾತಿಮಾ ಬೇಗಂ, ಅರ್ಚನಾ ಮಠ, ಸಂಗಮೇಶ್ ರೋಣದ, ಸುನಿಲ್ ಜೇರಟಗಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *