ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ: ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

ಸುದ್ದಿ ಸಂಗ್ರಹ

ದಿಸ್ಪುರ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ.

ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೆ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೆ ದೊಡ್ಡ ಹಾನಿ ಅಥವಾ ಜೀವಹಾನಿ ವರದಿಯಾಗಿಲ್ಲ. ಪರಿಸ್ಥಿತಿಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ತಿಳಿಸಿದ್ದಾರೆ. ಕೇಂದ್ರ ಬಂದರು ಸಚಿವರು ಆಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್, ಜನರು ಜಾಗರೂಕರಾಗಿರಲು ಸಲಹೆ ನೀಡಿದ್ದಾರೆ.

ಸೆಪ್ಟೆಂಬರ್ 2 ರಂದು ಅಸ್ಸಾಂನ ಸೋನಿತ್‌ಪುರದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದಾದ ಕೆಲವು ದಿನಗಳ ನಂತರ ಈ ಭೂಕಂಪ ಸಂಭವಿಸಿದೆ.

Leave a Reply

Your email address will not be published. Required fields are marked *