ವಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜೀವನದುದ್ದಕ್ಕೂ ದೇಶದ ಒಳಿತಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯದಿಂದ ನೂರಾರು ವರ್ಷಗಳು ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆವೆ ಎಂದರು.
ಪುರಸಭೆ ಮಾಜಿ ವಿರೋಧ ಪಕ್ಷದ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಯೂ ನಿರ್ಭೀತಿಯಿಂದ ನೆಮ್ಮದಿಯ ಜೀವನ ನಡೆಸುವಂತೆ ಮಾಡಿದ ಭಾರತ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಸಂಭ್ರಮವನ್ನು ನಾವು ಆಚರಿಸುತ್ತಿರುವುದು ನಮ್ಮಲ್ಲಿ ಹೆಮ್ಮೆ ಹಿಮ್ಮಡಿಸಿದೆ ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್’ಸಿ ಮೂರ್ಚ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಶರಣಗೌಡ ಚಾಮನೂರ, ಅರ್ಜುನ ಕಾಳೆಕರ, ಭೀಮರಾವ ದೊರೆ, ಜಯದೇವ ಜೋಗಿಕಲಮಠ, ಶಿವಶಂಕರ ಕಾಶೆಟ್ಟಿ, ಕಿಶನ್ ಜಾಧವ್, ಪ್ರಕಾಶ ಪುಜಾರಿ, ಮಲ್ಲಿಕಾರ್ಜುನ ಸಾತಖೇಡ, ಅಯ್ಯಣ್ಣ ದಂಡೋತಿ, ಯಂಕಮ್ಮ ಗೌಡಗಾಂವ, ಉಮಾಭಾಯಿ ಗೌಳಿ, ಪ್ರಕಾಶ ಬಡಿಗೇರ, ಕಾಳಪ್ಪ ಪಂಚಾಳ, ಶಂಕರ ಕುಲಕರ್ಣಿ ಸೇರಿದಂತೆ ನೂರಾರು ಕಾರ್ಯಕರ್ತರು ಮೋದಿಜಿ ಅವರಿಗೆ ಜಯಘೋಷ ಕೂಗಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.