ಚಿತ್ತಾಪುರ: ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ನಿರಂತರವಾಗಿ ಸುರಿದ ಮಳೆಗೆ ತಾಲೂಕಿನಾದ್ಯಂತ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಜನರು ಮನೆಯಿಂದ ಹೊರಗೆ ಬಾರದಂತೆ ಸುರಿದ ಮಳೆಯಿಂದ ಬೆಳಗ್ಗೆ ಜೀವನಾವಶ್ಯಕ ಸಾಮಗ್ರಿ ಖರೀದಿಸಲು, ದೈನಂದಿನ ಜೀವನಕ್ಕೆ ತೀವ್ರ ಅಡಚಣೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಮಳೆಯಿಂದ ತೀವ್ರ ತೊಂದರೆ ಅನುಭವಿಸಿದರು.
ಮಳೆಯಿಂದ ಹೊಲಗದ್ದೆಗಳು ನೀರುಮಯವಾಗಿವೆ. ಕೃಷಿ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ಮಳೆಯು ಕೂಲಿಕಾರ್ಮಿಕರಿಗೆ ಕೆಲಸವಿಲ್ಲದೆ ಮನೆಯಲ್ಲಿಯೆ ಇರುವಂತೆ ಮಾಡಿದೆ.