ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ: ಉದ್ವಿಘ್ನ ಪರಿಸ್ಥಿತಿ ನಿರ್ಮಾಣ

ತಾಲೂಕು

ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಪರಿಣಾಮ ತಾಲೂಕಿನಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ದುಷ್ಕರ್ಮಿಗಳು ಕಲ್ಲಿನಿಂದ ಮೂರ್ತಿಯ ಕೈ ಕಟ್ ಮಾಡಿದ್ದಾರೆ.

ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪಾ ಪಾಳಾ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಶ್ವಾನದಳ ಅಧಿಕಾರಿಗಳು ಮತ್ತು ಗ್ರಾಮ ಲೇಖಾಧಿಕಾರಿ ರೇವಣಸಿದ್ದಪ್ಪ ಪಾಟಿಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಖಂಡಿಸಿ ಕಲಬುರಗಿ-ಶಹಬಾದ್ ರಸ್ತೆ ತಡೆದು ಭಂಕೂರು ಕ್ರಾಸ್ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ‌ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನರು ಪ್ರತಿಭಟನೆಯಲ್ಲಿದ್ದರು.

Leave a Reply

Your email address will not be published. Required fields are marked *