ಸೇಡಂ ಆರ್‌ಎಸ್ಎಸ್ ಪಥಸಂಚಲನದಲ್ಲಿ ಸರ್ಕಾರಿ ವೈದ್ಯ ಭಾಗಿ

ಜಿಲ್ಲೆ

ಕಲಬುರಗಿ: ಸೇಡಂನಲ್ಲಿ ರವಿವಾರ ನಡೆದ ಆರ್‌ಎಸ್ಎಸ್ ಪಥಸಂಚಲನ ಕಾರ್ಯಕ್ರಮದಲ್ಲಿ ಸರ್ಕಾರಿ ವೈದ್ಯರೊಬ್ಬರು ಭಾಗಿಯಾಗಿದ್ದಾರೆ.

ಸೇಡಂ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ್ ಮನ್ನೆ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ. ಪಥಸಂಚಲನದಲ್ಲಿ ಭಾಗಿಯಾದ ವೈದ್ಯರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕೆ ಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *