ಕಲಬುರಗಿ: ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮ ಜೇವರ್ಗಿ ಪಟ್ಟಣದಲ್ಲಿ ಜರುಗಿತು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಕಿಲ್ @ ಸ್ಕೂಲ್ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಸರ್ಕಾರಿ ಐಟಿಐ ಕಾಲೇಜಿನ ಜೆಟಿಓ ಶಿವಶರಣಪ್ಪ ಹಳಿಮನಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜೆಟಿಓ ಸೈಯದ್ ಅಯಾಜ್, ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ದೊಡ್ಡಮನಿ, ಎನ್’ಎಸ್’ಎಸ್ ಅಧಿಕಾರಿ ಎಚ್.ಬಿ ಪಾಟೀಲ್, ಶಿಕ್ಷಣ ಪ್ರೇಮಿ ಬಸವರಾಜ ಹಡಪದ ಮತ್ತು ವಿದ್ಯಾರ್ಥಿಗಳು ಇದ್ದರು.