ಬಸವೇಶ್ವರ ಸಮಾಜ ಸೇವಾ ಬಳಗದಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ

ಕಲಬುರಗಿ: ನಗರದ ಆಳಂದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಶನಿವಾರ ಸಂಭ್ರಮದಿಂದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖಂಡ ಓಂಕಾರ ವಠಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಮತ್ತು ವಿದ್ಯಾರ್ಥಿಗಳು ಇದ್ದರು.

Continue Reading

ಆಂಧ್ರದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ: 10 ಭಕ್ತರು ಸಾವು

ಅಮರಾವತಿ: ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಜನ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವನ್ನು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ಮಾಡುವ ಮೂಲಕ ಮುಖಂಡರೊಂದಿಗೆ ಸಂಭ್ರಮದಿಂದ ಆಚರಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಮ್ಮ ನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಯ ರೋಮಾಂಚಕ ಅಭಿವ್ಯಕ್ತಿಯೇ ಕನ್ನಡ ರಾಜ್ಯೋತ್ಸವ ಎಂದರು. ನಮ್ಮ ರಾಜ್ಯ ರಚನೆಗೆ ಕಾರಣವಾದ ಹೋರಾಟಗಳಿಗೆ ಗೌರವ ಸಲ್ಲಿಸುವ, ನಮ್ಮ ನೆಲದ ಪರಂಪರೆಯನ್ನು ಆಚರಿಸಲು ನಾವೆಲ್ಲರು ಒಗ್ಗೂಡುವ ದಿನ. ಈ […]

Continue Reading

ಸೈಡ್‌ ಕೊಡದಿದ್ದಕ್ಕೆ ಕಿರಿಕ್‌, ಬೈಕ್‌ಗೆ ಕ್ಯಾಬ್ ಗುದ್ದಿಸಿ ದುಂಡಾವರ್ತನೆ – ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ‌ಸೈಡ್‌ ಕೊಡದಿದ್ದಕ್ಕೆ ಬೈಕ್‌ಗೆ ಕಾರು ಗುದ್ದಿಸಿ ಕ್ಯಾಬ್‌ ಚಾಲಕ ದುಂಡಾವರ್ತನೆ ತೋರಿದ ಘಟನೆ ನಗರದ ಕೆ.ಆರ್‌ ಪುರದ ಬಳಿ ನಡೆದಿದೆ. ಸೈಡ್ ಕೊಡುವ ವಿಚಾರಕ್ಕೆ ಕ್ಯಾಬ್‌ ಚಾಲಕ ಹಾಗೂ ಬೈಕ್‌ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ವಲ್ಪ ಮುಂದೆ ಬಂದು ಬೈಕ್ ಸವಾರ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಕ್ಯಾಬ್‌ ಚಾಲಕ ಕಾರಿನಲ್ಲಿ ಬೈಕ್‌ಗೆ ಗುದ್ದಿಸಿ ಸವಾರನನ್ನು ಬೀಳಿಸಿದ್ದಾನೆ. ಕ್ಯಾಬ್ ಚಾಲಕನ ದುಂಡಾವರ್ತನೆ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾನದಲ್ಲಿ […]

Continue Reading

ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading

ರಾಷ್ಟ್ರೀಯ ಏಕತಾ ದಿನ ಆಚರಣೆ: ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧನೆ

ಶಹಾಬಾದ: ಸರ್ದಾರ್ ವಲ್ಲಭವಾಯ್ ಪಟೇಲ್ ಅವರು ದೇಶದ ಎಲ್ಲಾ ಸಂಸ್ಥಾನಗಳನ್ನು ಒಗ್ಗೂಡಿಸಿದರು. ದೇಶದ ಐಕ್ಯತೆ, ಸಮಗ್ರತೆ, ಆತಂರಿಕ ಭದ್ರತೆಗಾಗಿ ಶ್ರಮಿಸಿದ ಮಹನೀಯರು ಎಂದು ಮುಖ್ಯಗುರು ಸವಿತಾ ಬೆಳಗುಂಪಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭವಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲರ ಸಾಧನೆಗಳು ನಮಗೆಲ್ಲರಿಗೂ ಸ್ಫೂರ್ತಿದಾಯಕ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಲು ಏಕತಾ ದಿನಾಚರಣೆ ಪ್ರೇರಣೆಯಾಗಿದೆ […]

Continue Reading

ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ನೂತನ ಸದಸ್ಯ ಬಾಬುರಾವ ಪಂಚಾರರಿಗೆ ಕಸಾಪದಿಂದ ಸನ್ಮಾನ

ಶಹಾಬಾದ: ನಗರದ ಕನ್ನಡ ಭವನದಲ್ಲಿ ಸೋಲಾಪುರ ರೈಲ್ವೆ ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡ ಬಾಬುರಾವ ಪಂಚಾರ ಅವರಿಗೆ ಕಸಾಪದಿಂದ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಶರಣಬಸಪ್ಪ ಕೋಬಾಳ, ಕಾರ್ಯದರ್ಶಿ ಶರಣು ವಸ್ತ್ರದ, ಪತ್ರಕರ್ತ ವಾಸುದೇವ ಚವ್ಹಾಣ್, ಹಿರಿಯರಾದ ಶರಣಗೌಡ ಪಾಟೀಲ್ ಗೋಳಾ(ಕೆ), ಸಿದ್ಧಲಿಂಗಯ್ಯ ಹಿರೇಮಠ, ಕನಕಪ್ಪ ದಂಡಗುಲಕರ್ ಇದ್ದರು. 

Continue Reading

ನಿವೃತ್ತ ಪ್ರಾಚಾರ್ಯ ಬಸವರಾಜ ಬಿರಾದಾರ ಅವರಿಗೆ ಬೀಳ್ಕೊಡುಗೆ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಬಸವರಾಜ ಬಿರಾಜದಾರ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು. ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಬಿರಾದಾರ ಅವರಿಗೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಬಿರಾದಾರ ಅವರಿಗೆ ಸತ್ಕರಿಸಿ, ಅವರ ಅನುಪಮ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ […]

Continue Reading

ಸುರಕ್ಷತೆಯಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕರು ಅಸ್ವಸ್ಥ: ಓರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸುರಕ್ಷತೆಗಳಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ನಗರದ ನೀಲಸಂಧ್ರದ ಜಾನ್ಸನ್ ಮಾರ್ಕೆಟ್ ಬಳಿ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನಿಲದ ದುರ್ವಾಸನೆಗೆ ಕಾರ್ಮಿಕರು ಮ್ಯಾನ್‌ಹೋಲ್‌ ಸಿಲುಕಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಹೋಲ್‌ನಲ್ಲಿ ಒದ್ದಾಡುತ್ತಿದ್ದ ಕಾರ್ಮಿಕರನ್ನ ಸ್ಥಳೀಯರು ಮೇಲೆತ್ತಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುತ್ತಮುತ್ತಲಿನವರ ಸಮಯಪ್ರಜ್ಞೆಯಿಂದ ಕಾರ್ಮಿಕರ ಜೀವ ಉಳಿದಿದೆ. ರಕ್ಷಣೆಗೆ ಬಂದವನೂ ಅಸ್ವಸ್ಥಘಟನೆ ಸಂಬಂಧ ಪ್ರತ್ಯಕ್ಷದರ್ಶಿ ಮೊಹಮ್ಮದ್ ಖಾನ್ ಹೇಳಿಕೆಯಂತೆ ಬೆಳಗ್ಗ 11 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಕಳೆದೆರೆಡು […]

Continue Reading

ಭಾರತದ ಏಕತೆಗಾಗಿ ಬದುಕಿದ ಸರ್ದಾರ್: ಯಾರಿ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗೌರವ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭಾರತದ ಏಕತೆ ಮತ್ತು ಸಮಗ್ರತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಾಜಪ್ರಭುತ್ವದ ರಾಜ್ಯಗಳನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ಭಾರತದ ಏಕತೆಗಾಗಿ ಬದುಕಿದ ಮಹಾನ್ ದೇಶಭಕ್ತರು ಎಂದರು. ಅವರ ಜನ್ಮದಿನದಂದು ನಾವು ರಾಷ್ಟ್ರೀಯ ಏಕತೆಯ […]

Continue Reading