ಕಲಬುರಗಿ: ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಕಾಳಗಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಕ್ರೀಡಾಪಟುಗಳು ಅಥ್ಲೆಟಿಕ್ಸ್ನ ವಿವಿಧ ಕ್ರೀಡೆಗಳಲ್ಲಿ ವಿಜಯಶಾಲಿಗಳಾಗುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
10ನೇ ತರಗತಿಯ ವಿದ್ಯಾರ್ಥಿಗಳಾದ ಸಮೀರ್ ಎಂ ಪಟೇಲ್ ಟ್ರಿಪಲ್ ಜಂಪ್’ನಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಮತ್ತು ಅಭಿಷೇಕ್ ಶಿವಾನಂದ 400 ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನಗಳಿಸುವ ಮೂಲಕ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಕ್ರೀಡಾಪಟುಗಳ ಸಾಧನೆಯನ್ನು ತರಬೇತುದಾರ, ದೈ.ಶಿ ಶಿಕ್ಷಕ ನಾಗರಾಜ ಮಾಳಗೆ, ಮುಖ್ಯಗುರು ಮತ್ತು ಶಿಕ್ಷಕವೃಂದ ಅಭಿನಂದಿಸಿದ್ದಾರೆ.