ನಾಳೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಜಿಲ್ಲಾಡಳಿತ, ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಅ.31ರಂದು ಬೆಳಗ್ಗೆ 10.30ಕ್ಕೆ ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ದಿನಾಚರಣೆ ನಿಮಿತ್ತ ‘ಸರ್ವೋತ್ತಮ ಸೇವಾ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023, 2024, 2025ನೇ ಸಾಲಿನ ಒಟ್ಟು 30 ಜನರ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಜತೆಗೆ ತಲಾ 25 ಸಾವಿರ ರೂ. ಗೌರವಧನ ನೀಡಿ ಗೌರವಿಸಲಾಗುವುದು ಎಂದರು.

ಪ್ರಾರಂಭದಲ್ಲಿ371ಜೆ ನಿಯಮಾವಳಿಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಡಾ.ರಜಾಕ್ ಉಸ್ತಾದ್ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರು, ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಮೇಯರ್ -ಉಪಮೇಯರ್, ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸುರೇಶ ಶರ್ಮಾ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಸುರೇಶ ವಗ್ಗೆ, ನಿಜಲಿಂಗಪ್ಪ ಕೋರಳ್ಳಿ, ಸಿದ್ದಲಿಂಗಯ್ಯ ಮಠಪತಿ ಇದ್ದರು.

Leave a Reply

Your email address will not be published. Required fields are marked *