ಕಲಬುರಗಿ: ನಗರದ ಆಳಂದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಶನಿವಾರ ಸಂಭ್ರಮದಿಂದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖಂಡ ಓಂಕಾರ ವಠಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಮತ್ತು ವಿದ್ಯಾರ್ಥಿಗಳು ಇದ್ದರು.