ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ಜರುಗಿದ “ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ”ಯಲ್ಲಿ ಕಾನೂನು ಪಾಲನೆಯ ಪ್ರತಿಜ್ಞೆ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ್, ಉಪನ್ಯಾಸಕರಾದ ಅಸ್ಮಾ ಜಬೀನ್, ಸುವರ್ಣಲತಾ ಭಂಡಾರಿ, ಮಲ್ಲಿಕಾರ್ಜುನ ದೊಡ್ಡಮನಿ, ಲಿಂಗರಾಜ ಹಿರೇಗೌಡ, ಪ್ರದಸ ಪ್ರೇಮಾ ಸುರಪುರ, ಅತಿಥಿ ಉಪನ್ಯಾಸಕರಾದ ವೀರೇಶ ಸಾಹು ಗೋಗಿ, ನಾರಾಯಣಸ್ವಾಮಿ, ಅಲಿಯಾ ತಬಸ್ಸುಮ್, ಶಿವಶರಣಪ್ಪ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.