ಸುದ್ದಿ ಸಂಗ್ರಹ ಶಹಬಾದ
ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ನವೆಂಬರ್ 15 ರಂದು ಶನಿವಾರ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಐಕ್ಯೂಎಸ್‌ಸಿ, ಎನ್.ಎಸ್.ಎಸ್ ಘಟಕ ಮತ್ತು ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆ ಕಲಬುರ್ಗಿ ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ್ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.