ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ರಿಷಾ ಬಟ್ಟೆಗಳನ್ನು ವಾಷ್ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ದೂರು ಕೊಡಲಾಗಿದೆ. ಜೊತೆಗೆ ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತಾನಾಡಿದ್ದಾರೆ ಅಂತಾ ದೂರಲಾಗಿದೆ.
ಈ ಬಗ್ಗೆ ಮಹಿಳಾ ಆಯೋಗ ವಿಡಿಯೋ ಫೂಟೇಜ್ ಪರಿಶೀಲನೆ ಮಾಡಿದೆ. ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೆ ಸಾಕ್ಷಿ ಸಿಗದ ಕಾರಣಕ್ಕೆ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಿಕೊಡಲಾಗಿದೆ.