ಸುದ್ದಿ ಸಂಗ್ರಹ ಚಿತ್ತಾಪುರ
ತಾಲೂಕಿನಲ್ಲಿ ಡಿಸೆಂಬರ್ 21ರಿಂದ ನಾಲ್ಕು ದಿನ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದೆ, ಸಾರ್ವಜನಿಕರಿಗೆ ಇದರ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಡಿ.21 ರಿಂದ 24ರ ವರೆಗೆ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೊ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದರಿ ಕಾರ್ಯಕ್ರಮದಲ್ಲಿ ಐದು ವರ್ಷ ಒಳಪಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡಲಾಗುವುದು ಎಂದರು.
ತಾಲೂಕಿನ ಒಟ್ಟು 26,918 ಮಕ್ಕಳಿಗೆ (0-5 ವರೆಗಿನ ಮಕ್ಕಳಿಗೆ) ಪಲ್ಸ್ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದರಲ್ಲಿ 11 ತಂಡಗಳು ಬಸ್ ನಿಲ್ದಾಣಗಳಲ್ಲಿ ಕರ್ತವ್ಯ ನಿರ್ವಹಿಸುತ್ತವೆ, 109 ತಂಡಗಳು ಭೂತ್ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಲಿವೆ. 24 ಜನ ಆರೋಗ್ಯ ಸಂಸ್ಥೆಗಳ ಮೇಲ್ವಿಚಾರಕರು ಲಸಿಕಾ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡಲ್ಲಿದ್ದಾರೆ ಎಂದರು.
ತಾಲೂಕ ಟಾಸ್ಕ ಫೋರ್ಸ್ ಸಮಿತಿ ಸಭೆಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.