ಸುದ್ದಿ ಸಂಗ್ರಹ ಹಾಸನ
ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ನಲ್ಲಿ ನಡೆದಿದೆ.
ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳ ಪೈಕಿ 13 ಜನ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಉಳಿದವರಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.