ವಿಜಯಪುರ: ಪ್ರತಿಭಟನೆ ತಡೆಯಲು ಮುಂದಾದ PSI, ಪೇದೆಗೆ ಸ್ವಾಮಿಜಿ ಕಪಾಳಮೋಕ್ಷ

ಜಿಲ್ಲೆ

ಸುದ್ದಿ ಸಂಗ್ರಹ ವಿಜಯಪುರ
ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಪ್ರತಿಭಟನೆಯಲ್ಲಿ ಸ್ವಾಮಿಜಿಗಳು ಪಾಲ್ಗೊಂಡಿದ್ದಾರೆ. ಇದೆ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ ಪಾಟೀಲ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮಿಜಿ ಸಿಟ್ಟಿಗೆದ್ದು ಪಿಎಸ್ಐ ಮತ್ತು ಪೊಲೀಸ್ ಪೇದೆಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *