ಸುದ್ದಿ ಸಂಗ್ರಹ ಬಳ್ಳಾರಿ
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ತನ್ನ ಮನೆಯ ಮುಂದೆ ನಡೆದ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಕ್ಷೇತ್ರದ ಕೆಲಸಕ್ಕೆ ಹೋಗಿದ್ದೆ. ನಾನು ಇಲ್ಲದ ಸಮಯದಲ್ಲಿ ಭರತ್ ರೆಡ್ಡಿ ಬೆಂಬಲಿಗರು ಮನೆಯ ಮುಂದೆ ಕುರ್ಚಿ ಹಾಕಿ ಗಲಾಟೆ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ನಾನು ಶ್ರೀರಾಮುಲು ಅವರಿಗೆ ತಿಳಿಸಿದ್ದೆ. ಅವರು ಪೊಲೀಸರ ಸಮ್ಮುಖದಲ್ಲೆ ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿದ್ದಾರೆ ಎಂದು ದೂರಿದರು.
ನಾನು ಕಾರಿನಿಂದ ಬಂದು ಇಳಿದ ಕೂಡಲೆ ಸತೀಶ್ ರೆಡ್ಡಿ ಗನ್ ಮ್ಯಾನ್’ಗಳು ನಾಲ್ಕಾರ್ ರೌಂಡ್ ಫೈರ್ ಮಾಡಿದ್ದಾರೆ. ನನ್ನ ಹತ್ಯೆ ಮಾಡಲೆಂದೆ ಇಲ್ಲಿ ಗಲಾಟೆ ಮಾಡಿದ್ದಾರೆ ಎಂದು ದೂರಿ ಫೈರ್ ಮಾಡಿದ ಬುಲೆಟ್ ಪ್ರದರ್ಶಿಸಿದರು.
ವಾಲ್ಮೀಕಿ ಪುತ್ಥಳಿ ಪ್ರತಿಷ್ಟಾಪನೆ ಹೆಸರಲ್ಲಿ ನಾರಾಭರತ್ ರೆಡ್ಡಿ ಊರಿಗೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಕೊಲೆಗೆಡುಕರನ್ನು ಹಿಂದಿಟ್ಟುಕೊಂಡು ದಬ್ಬಾಳಿಕೆ ನಡೆಸುತ್ತಿದ್ದಾರೆ. ನಾರಾಭರತ್ ರೆಡ್ಡಿ ಯಾವುದೆ ಕೆಲಸ ಮಾಡಿಲ್ಲ. ನಾನು ಬಳ್ಳಾರಿಗೆ ಬಂದರೆ ಕಾಂಗ್ರೆಸ್ ಪಕ್ಷ ಸೋಲಾಗುತ್ತದೆ ಎಂಬ ಕಾರಣಕ್ಕೆ ಗಲಾಟೆ ಮಾಡುತ್ತಿದ್ದಾರೆ.