ಸುದ್ದಿ ಸಂಗ್ರಹ ವಾಡಿ
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ನವದೆಹಲಿಯಲ್ಲಿ ಮಂಗಳವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ, ಮುಖಂಡರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು, ಪ್ರಧಾನಿ ಮೋದಿ ಅವರು ಅಧ್ಯಕ್ಷ ನಿತಿನ್ ನಬಿನ್ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.
ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ದೇಶ ಸೇವೆ ಧ್ಯೇಯದೊಂದಿಗೆ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು, ಐದು ಬಾರಿ ಶಾಸಕರಾಗಿ, ಬಿಹಾರದ ಸಚಿವರಾಗಿ ಸೇವೆ ಸಲ್ಲಿಸಿರುವ ನಬಿನ್ ಅವರು ಇತಿಹಾಸದಲ್ಲೆ ಅತ್ಯಂತ ಕಿರಿಯ ವಯಸ್ಸಿನಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಅವರ ಸಾರ್ವಜನಿಕ, ರಾಜಕೀಯ ಜೀವನ ಮತ್ತು ಕ್ರಿಯಾಶೀಲ ಸಂಘಟನಾತ್ಮಕ ಗುಣ ನಮ್ಮಂತ ಕಾರ್ಯಕರ್ತರಿಗೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ,
ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ, ಇಂಗಳಗಿ ಶಕ್ತಿ ಕೇಂದ್ರದ ಅಧ್ಯಕ್ಷ ಸೋಮು ಚವ್ಹಾಣ, ಎಸ್.ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಶರಣಗೌಡ ಚಾಮನೂರ, ಗಿರಿಮಲ್ಲಪ್ಪ ಕಟ್ಟಿಮನಿ, ಭೀಮರಾವ ದೊರೆ, ಅರ್ಜುನ ಕಾಳೆಕರ, ಹರಿ ಗಲಾಂಡೆ, ಬಸವರಾಜ ಕೊಲಿ, ಕಿಶನ ಜಾಧವ, ಅಂಬದಾಸ ಜಾಧವ, ಪ್ರಕಾಶ ಪುಜಾರಿ, ರಿಚರ್ಡ್ ಮಾರೆಡ್ಡಿ, ಯಂಕಮ್ಮ ಗೌಡಗಾಂವ, ಉಮಾಭಾಯಿ ಗೌಳಿ, ವಿಶಾಲ ನಿಂಬರ್ಗಾ, ರಾಜು ಕೊಲಿ, ವಿಶ್ವರಾಧ್ಯ ತಳವಾರ, ವಿಶ್ವನಾಥ ಬಳವಡಗಿ, ವಿಕ್ರಮ ಜಾಧವ, ರಾಜು ಗುತ್ತೇದಾರ ಮತ್ತು ನಿಂಗಪ್ಪ ತಳವಾರ ಸೇರಿದಂತೆ ಅನೇಕರು ಇದ್ದರು.