ವಾಡಿ: ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಪಟ್ಟಣದ

ಸುದ್ದಿ ಸಂಗ್ರಹ ವಾಡಿ
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಿದರು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭ್ರಾತೃತ್ವ ಭಾರತದ ಹಿರಿಮೆ ಮೆರೆಯಬೇಕಾಗಿದೆ ಎಂದರು.

12ನೇ ಶತಮಾನದ ಅಂಬಿಗರ ಚೌಡಯ್ಯನವರು ತಮ್ಮ ಕುಲಕಸುಬು ಮಾಡುತ್ತಾ ಸಮಾಜ ಸುಧಾರಕರಾದರು. ಸಮಾಜದ ಕೆಟ್ಟ, ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಸಾಮಾಜದ ಹರಿಕಾರರಾಗಿ ಕ್ರಾಂತಿಯನ್ನುಂಟು ಮಾಡಿದರು. ಅವರು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಆದರ್ಶ ಕೊಡುಗೆ ನೀಡಿದ್ದಾರೆ. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಅಂಬಿಗರ ಚೌಡಯ್ಯನವರು ಯಾವುದೆ ಜಾತಿಪರ ನಿಲ್ಲಲಿಲ್ಲ. ವಚನಗಳ ಮೂಲಕ ಜಾತಿ ವ್ಯವಸ್ಥೆ, ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಲು ಯತ್ನಿಸಿದ್ದರು. ಬಡವರ ಪರವಾದ ವಚನಗಳು ರಚಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ತನ್ನ ಕಾಯಕದ ಮಹಾನ್‌ ಮಾನವತವಾದಿಯಾಗಿ ಮೆರೆದಿದ್ದರು. ಅಂತಹ ಮಹಾನ್ ಶರಣರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದ ಎಲ್ಲಾ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ, ಇಂಗಳಗಿ ಶಕ್ತಿ ಕೇಂದ್ರದ ಅಧ್ಯಕ್ಷ ಸೋಮು ಚವ್ಹಾಣ, ಎಸ್.ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಶರಣಗೌಡ ಚಾಮನೂರ, ಗಿರಿಮಲ್ಲಪ್ಪ ಕಟ್ಟಿಮನಿ, ಭೀಮರಾವ ದೊರೆ, ಅರ್ಜುನ ಕಾಳೆಕರ, ಹರಿ ಗಲಾಂಡೆ, ಬಸವರಾಜ ಕೊಲಿ, ಕಿಶನ ಜಾಧವ, ಅಂಬಾದಾಸ ಜಾಧವ, ಪ್ರಕಾಶ ಪುಜಾರಿ, ರಿಚರ್ಡ್‌ ಮಾರೆಡ್ಡಿ, ಯಂಕಮ್ಮ ಗೌಡಗಾಂವ, ಉಮಾಭಾಯಿ ಗೌಳಿ, ವಿಶಾಲ ನಿಂಬರ್ಗಾ, ರಾಜು ಕೊಲಿ, ವಿಶ್ವರಾಧ್ಯ ತಳವಾರ, ವಿಶ್ವನಾಥ ಬಳವಡಗಿ, ವಿಕ್ರಮ ಜಾಧವ, ರಾಜು ಗುತ್ತೇದಾರ, ನಿಂಗಪ್ಪ ತಳವಾರ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *