ವಾಡಿ: ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ

ಪಟ್ಟಣದ

ಸುದ್ದಿ ಸಂಗ್ರಹ ವಾಡಿ
ಪಟ್ಟಣದ ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಮುಖಂಡರಾದ ವಿಠಲ ನಾಯಕ, ಬಸವರಾಜ ಪಂಚಾಳ ಅವರು ಮಹಾತ್ಮ ಗಾಂಧಿ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ ಪ್ರಭುತ್ವ ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜವಾದ ಅಸ್ಥಿತ್ವ ಸ್ಥಾಪಿಸಿದ ಈ ದಿನ ನಮ್ಮ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ ಎಂದರು.

ಡಾ.ಬಿ.ಆರ್ ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ನಮ್ಮ ಭವ್ಯ ಭಾರತಕ್ಕೆ ದಾರಿದೀಪವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್.ಸಿ ಮೋರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ, ಮುಖಂಡರಾದ ಯಮನಪ್ಪ ಪುಜಾರಿ, ಹರಿ ಗಲಾಂಡೆ, ಅರ್ಜುನ ಕಾಳೆಕರ, ಶರಣಗೌಡ ಚಾಮನೂರ, ಕಿಶನ ಜಾಧವ, ಪ್ರಕಾಶ ಪುಜಾರಿ, ಶಿವಶಂಕರ ಕಾಶೆಟ್ಟಿ, ಅಶೋಕ ಪವಾರ, ರಿಚರ್ಡ್‌ ಮಾರೆಡ್ಡಿ, ರಾಜು ಪವಾರ, ಅಯ್ಯಣ್ಣ ದಂಡೋತಿ, ಮಲ್ಲಿಕಾರ್ಜುನ ಸಾತಖೇಡ, ಹಣಮಂತ ಚವ್ಹಾಣ, ಕಾಶಿನಾಥ ಶೆಟಗಾರ, ನಾಮದೇವ ರಾಠೋಡ, ಮಹೇಂದ್ರ ಕುಮಾರ ಪುಜಾರಿ, ಪ್ರೇಮ ರಾಠೊಡ, ಸಂತೋಷ ದಹಿಹಂಡೆ, ವಿಶಾಲ ನಿಂಬರ್ಗಾ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ, ಉಮಾಭಾಯಿ ಗೌಳಿ, ಶರಣಮ್ಮ ಯಾದಗಿರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *