ಸೇವಾಲಾಲ್ ಜಯಂತಿ ಆಚರಣೆಗೆ ನಿರ್ಧಾರ

ಪಟ್ಟಣದ

ಸುದ್ದಿ ಸಂಗ್ರಹ ಚಿತ್ತಾಪುರ
ಪಟ್ಟಣದಲ್ಲಿ ಫೆ.15ರಂದು ತಾಲೂಕು ಆಡಳಿತದಿಂದ ಆಯೋಜನೆ ಮಾಡಿರುವ ಬಂಜಾರ ಸಮಾಜದ ಕುಲಗುರು ಸಂತ ಸೇವಾಲಾಲ್ ಮಹಾರಾಜರ 287 ಜಯಂತಿ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಪಾಲ್ಗೊಂಡು ಸಡಗರ, ಸಂಭ್ರಮದಿಂದ ಆಚರಣೆ ಮಾಡಬೇಕು ಎಂದು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲ ರಾಠೋಡ ಹೇಳಿದ್ದಾರೆ.

ಪಟ್ಟಣದಲ್ಲಿ ಶುಕ್ರವಾರ ನಡೆದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತ ಕೇಂದ್ರ ಪ್ರಜಾಸೌಧ ಅವರಣದಲ್ಲಿ ಬೆಳಗ್ಗೆ 10 ಗಂಟೆಗೆ ಸೇವಾಲಾಲ್ ಮಹಾರಾಜರ ಭಾವಚಿತ್ರದ ಪೂಜೆ ಮತ್ತು ವೇದಿಕೆ ಕಾರ್ಯಕ್ರಮದ ನಂತರ ಭವ್ಯ ಮೆರವಣಿಗೆ ಮಾಡಲಾಗುತ್ತದೆ. ಸಮಾಜದ ಯುವಕರು, ಹಿರಿಯರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಮೆರವಣಿಗೆ ಸಾಗುವ ಮಾರ್ಗದಲ್ಲಿನ ರೈಲ್ವೆ ನಿಲ್ದಾಣ ಸಮೀಪ ಸೇವಾಲಾಲ್‌ ವೃತ್ತದಲ್ಲಿ ಪೂಜೆ, ಧ್ವಜಾರೋಹಣ
ನಡೆಯಲಿದೆ. ನಾಗಾವಿ ಚೌಕ್, ಜನತಾ ಚೌಕ್, ಭುವನೇಶ್ವರಿ ಚೌಕ್, ಅಂಬೇಡ್ಕರ್ ವೃತ್ತ, ಲಾಡ್ಡಿಂಗ್ ಕ್ರಾಸ್ ಮೂಲಕ ತಹಸೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ ಎಂದರು.

ಉತ್ಸವ ಸಮಿತಿ ಗೌರವಾಧ್ಯಕ್ಷ ಚಂದು ಜಾಧವ, ಮುಖಂಡರಾದ ಭೀಮಸಿಂಗ್ ಚವ್ಹಾಣ, ಆಕಾಶ ಚವ್ಹಾಣ
ಮಾತನಾಡಿದರು.

ಈ ಸಂದರ್ಭದಲ್ಲಿ ಸುನಿಲ್ ರಾಠೋಡ, ದೇವಿದಾಸ ಚವ್ಹಾಣ, ಶಂಕರ ನಾಯಕ, ನೀಲಕಂಠ ಪವಾರ, ಗೋಪಿ ರಾಠೋಡ, ರವಿ ಜಾಧವ, ರಾಜು ರಾಠೋಡ, ಜಗದೀಶ ಪವಾರ, ಶ್ರೀಕಾಂತ ರಾಠೋಡ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *