ಸುದ್ದಿ ಸಂಗ್ರಹ ಕಲಬುರಗಿ
ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.
ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಂಭವಿಸಿದ ದುರಂತದಲ್ಲಿ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಸಾಮಾನುಗಳು ಸೇರಿದಂತೆ 50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣ ಎಂದು ಶಂಕಿಸಲಾಗಿದೆ.
ಬೆಳಿಗ್ಗೆ 4.10ರ ಸುಮಾರಿಗೆ ದೌಡಾಯಿಸಿ ಅಗ್ನಿಶಾಮಕ ಸಿಬ್ಬಂದಿ 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ಜ್ವಾಲೆ ನಂದಿಸಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ಮಾರ್ಗದರ್ಶನದಲ್ಲಿ ಸಹಾಯಕ ಅಗ್ನಿಶಾಮಕ ಅಧಿಕಾರಿ ಮಹಾಂತೇಶ, ಸಿಬ್ಬಂದಿಗಳಾದ ಅಶ್ಫಾಕ್, ಸುಭಾಷ ಹಾದಿಮನಿ, ಶ್ರೀಕಾಂತ, ಬಸವರಾಜ, ಮಿರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.