ಕಲಬುರಗಿ: ರಾಜೇಶ್ ನಾಗೂರೆ ಅವರಿಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ನಗರದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ರಾಜೇಶ್ ನಾಗೂರೆ ಅವರಿಗೆ 2025ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅನಿತಾ ಕೌಲ್ ಸ್ಮರಣಾರ್ಥ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್‌.ಎನ್‌ ಮುಕುಂದರಾಜ್‌ , ಬೆಂಗಳೂರಿನ ಬಿಸಿನೆಸ್‌ ಕಾರಿಡಾರ್‌ ಆಯುಕ್ತ ಎಲ್‌.ಕೆ ಅತಿಕ್‌, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯಧ್ಯಕ್ಷ ಆರ್‌.ಎನ್‌ ರಾಜಾನಾಯಕ್‌, ಕಾರ್ಯದರ್ಶಿ ಬಸವರಾಜ ಮತ್ತು ಖಜಾಂಚಿ ಕೆ.ಬಿ ಮಹದೇವಪ್ಪ ಭಾಗವಹಿಸಿದ್ದರು.

ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಂಶುಪಾಲರು, ಮುಖ್ಯಗುರುಗಳು ಮತ್ತು ಸಮಸ್ತ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *