ಕನ್ನಡ ಶಾಲೆ ಉಳಿಸಿ-ಬೆಳೆಸಿ ಅಭಿಯಾನದ ತಾಲೂಕಾಧ್ಯಕ್ಷರಾಗಿ ಗಿರೀಶರೆಡ್ಡಿ ನೇಮಕ‌

ಪಟ್ಟಣದ

ಸುದ್ದಿ ಸಂಗ್ರಹ ಕಾಳಗಿ
ನಾಡು ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆ ಉಳಿಸಿ– ಬೆಳೆಸಿ ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಾಳಗಿ ತಾಲೂಕಾಧ್ಯಕ್ಷರಾಗಿ ಗಿರೀಶರೆಡ್ಡಿ ರಾಜಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ ತಿಳಿಸಿದ್ದಾರೆ.

ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದೊಂದಿಗೆ ಈ ಅಭಿಯಾನ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು, ಹಿರಿಯರು ಮತ್ತು ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ ಗಿರೀಶ ರೆಡ್ಡಿ ರಾಜಾಪುರ ಅವರಿಗೆ ಈ ಮಹತ್ವದ ಜವಾಬ್ದಾರಿ ವಹಿಸಲಾಗಿದೆ ಎಂದರು.

ಅಭಿಮಾನದ ನೂತನ ತಾಲೂಕಾಧ್ಯಕ್ಷ ಗಿರೀಶ ರೆಡ್ಡಿ ರಾಜಾಪುರ ಮಾತನಾಡಿ, ಕನ್ನಡ ಶಾಲೆಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನಾಡು-ನುಡಿ ಉಳಿಸುವ ಹೋರಾಟದಲ್ಲಿ ಶಿಕ್ಷಕರು, ‘ಪೋಷಕರು, ವಿದ್ಯಾರ್ಥಿಗಳು ಮತ್ತು ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ತಾಲೂಕಿನಲ್ಲಿ ಮಾದರಿ ಕಾರ್ಯಕ್ರಮಗಳು ರೂಪಿಸಲಾಗುವುದು ಎಂದರು.‌

ರಾಜ್ಯಮಟ್ಟದ ಅಭಿಯಾನದ ಉದ್ದೇಶಗಳಿಗೆ ತಕ್ಕಂತೆ ಕಾಳಗಿ ತಾಲೂಕಿನಲ್ಲಿ ಕನ್ನಡ ಶಾಲೆಗಳ ಬಲವರ್ಧನೆ ನಡೆಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕನ್ನಡ ಶಾಲೆ ಉಳಿಸಿ ಸಂಘಟನೆಯ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ, ಅಭಿಯಾನದ ಜಿಲ್ಲಾಧ್ಯಕ್ಷ ಅಣ್ಣಾರಾಯ ವಿ ಇವಣಿ, ಯಾದಗಿರ ಜಿಲ್ಲಾಧ್ಯಕ್ಷ ಡಾ.ಸಿದ್ದಲಿಂಗ ರೆಡ್ಡಿ, ಯಾದಗಿರ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರುದ್ರಾಂಬಿಕ ಆರ್ ಪಾಟೀಲ, ಸೇಡಂ ತಾಲೂಕಿನ ಪ್ರಧಾನ ಕಾರ್ಯದರ್ಶಿ ಈಶ್ವರಯ್ಯ ಸ್ವಾಮಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *