ಸುದ್ದಿ ಸಂಗ್ರಹ ಕಲಬುರಗಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ನವೀಕರಣ ಮತ್ತು ಹೊಸ ಸದಸ್ಯತ್ವ ಪಡೆಯಲು ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಿತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾ.10 ರಿಂದ ನಗರದ ಪತ್ರಿಕಾ ಭವನದಲ್ಲಿ ಅರ್ಜಿ ಪಡೆಯಬಹುದು. ಅರ್ಜಿ ನವೀಕರಣ ಅಥವ ನೂತನ ಸದಸ್ಯತ್ವ ಪಡೆಯಲು ಹಿಂದಿನ ವರ್ಷದ ಸಂಘದ ಕಾರ್ಡ್, ಸಂಪಾದಕರು ಅಥವಾ ಮಾಧ್ಯಮ ಸಂಸ್ಥೆಗಳು ನೀಡಿದ ಆದೇಶ ಪ್ರತಿ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಮತ್ತು 510 ರೂ. ಶುಲ್ಕದೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಮಾಚ್೯ 20 ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.
ಹೊಸದಾಗಿ ಅರ್ಜಿ ಸಲ್ಲಿಸುವವರು ಎಸ್ಎಸ್ಎಲ್ಸಿ ತೇರ್ಗಡೆ ಪ್ರಮಾಣ ಪತ್ರ ಲಗತ್ತಿಸಬೇಕು. ಜೊತೆಗೆ ಕನಿಷ್ಠ ಎರಡು ವರ್ಷ ಸೇವಾನುಭವ ಹೊಂದಿರುವ ಕುರಿತು ಸಂಸ್ಥೆಗಳಿಂದ ದೃಢಿಕರಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.