ಸುದ್ದಿ ಸಂಗ್ರಹ ಚಿತ್ತಾಪುರ
ಒಳ ಮೀಸಲಾತಿಯಿಲ್ಲದೆ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಹೇಳಿದರು.
ಚುನಾವಣಾ ಪೂರ್ವದಲ್ಲಿ ಸರ್ಕಾರ ಬಂದ ಮೊದಲ ಅಧಿವೇಶನದಲ್ಲಿ ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತದೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಚಿತ್ರದುರ್ಗ ಸಮಾವೇಶದಲ್ಲಿ ಅದೆ ಭರವಸೆ ನೀಡಲಾಗಿತ್ತು. ಸರ್ಕಾರ ಬಂದು ಎರಡು ವರ್ಷ ಮುಗಿಯುತ್ತಿದ್ದರೂ ಒಳಮೀಸಲಾತಿ ಜಾರಿಗೊಳಿಸಲು ಪ್ರಮಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಸಹಿ ಪಡೆದು ಅನುಮೋದನೆಗೊಂಡಿದೆ ಎಂದು ಸಂತೋಷಪಡುವ ಸಂದರ್ಭದಲ್ಲಿ ಒಳ ಮೀಸಲಾತಿಗೆ ಅನ್ವಯವಾಗದಂತೆ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೆವೆ ಎಂದು ಫೆಬ್ರವರಿ 26ರ ಸಚಿವ ಸಂಪುಟದ ತಿರ್ಮಾನ ಸಾಮಾಜಿಕ ನ್ಯಾಯಕ್ಕೆ ಘೋರ ಅನ್ಯಾಯವಾಗಿದೆ ಎಂದರು.
ಸರ್ಕಾರದ ಈ ತೀರ್ಮಾನವನ್ನು ಒಳ ಮೀಸಲಾತಿ ಹೋರಾಟಗಾರರು ಮತ್ತು ಸಾಮಾಜಿಕ ನ್ಯಾಯಪರವಿರುವ ಪ್ರಜ್ಞಾವಂತರೆಲ್ಲರು ಒಕ್ಕೊರಲಿನಿಂದ ಉಗ್ರವಾಗಿ ಖಂಡಿಸುತ್ತೆವೆ ಎಂದರು.